Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:14 - ಪರಿಶುದ್ದ ಬೈಬಲ್‌

14 ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:14
28 ತಿಳಿವುಗಳ ಹೋಲಿಕೆ  

ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.


ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು.


ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.


ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು