ಜೆಕರ್ಯ 4:2 - ಪರಿಶುದ್ದ ಬೈಬಲ್2 ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆಬಾಳುವಂಥದ್ದು. ಆದರೆ, ಅದು ಬಹುಬೇಗನೆ ತುಂಡಾದ ದಾರದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಲ್ಲಿ ಒಡೆದುಹೋದ ಬಿಂದಿಗೆಯಂತೆ ನಿಷ್ಟ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟೆಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಒಡೆದು ಬಾವಿಯೊಳಗೆ ಬಿದ್ದು ಹೋದಂತೆ ನಿಷ್ಪ್ರಯೋಜಕವಾಗುವುದು. ಆದ್ದರಿಂದಲೇ ಯೌವನ ಪ್ರಾಯದಲ್ಲಿರುವಾಗಲೇ ನೀನು ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.