ಜೆಕರ್ಯ 4:3 - ಪರಿಶುದ್ದ ಬೈಬಲ್3 ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೀಪಸ್ತಂಭದ ಪಕ್ಕದಲ್ಲಿ ಬಲಗಡೆ ಒಂದು, ಎಡಗಡೆ ಇನ್ನೊಂದು - ಹೀಗೆ ಎರಡು ಎಣ್ಣೆಯ ಮರಗಳಿವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಅಂತು ಎರಡು ಮರಗಳು ಅದರ ಪಕ್ಕಗಳಲ್ಲಿವೆ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು. ಅಧ್ಯಾಯವನ್ನು ನೋಡಿ |
ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆಬಾಳುವಂಥದ್ದು. ಆದರೆ, ಅದು ಬಹುಬೇಗನೆ ತುಂಡಾದ ದಾರದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಲ್ಲಿ ಒಡೆದುಹೋದ ಬಿಂದಿಗೆಯಂತೆ ನಿಷ್ಟ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟೆಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಒಡೆದು ಬಾವಿಯೊಳಗೆ ಬಿದ್ದು ಹೋದಂತೆ ನಿಷ್ಪ್ರಯೋಜಕವಾಗುವುದು. ಆದ್ದರಿಂದಲೇ ಯೌವನ ಪ್ರಾಯದಲ್ಲಿರುವಾಗಲೇ ನೀನು ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.