Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:4 - ಪರಿಶುದ್ದ ಬೈಬಲ್‌

4 ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:4
11 ತಿಳಿವುಗಳ ಹೋಲಿಕೆ  

“ಇವು ಏನನ್ನು ಸೂಚಿಸುತ್ತವೆ?” ಎಂದು ನನ್ನೊಡನೆ ಮಾತನಾಡುತ್ತಿದ್ದ ದೂತನೊಡನೆ ವಿಚಾರಿಸಿದೆನು.


ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.


ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


“ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು.


“ಈ ಕೊಂಬುಗಳೇನು?” ಎಂದು ನಾನು ದೇವದೂತನೊಂದಿಗೆ ವಿಚಾರಿಸಿದೆನು. ಅದಕ್ಕವನು, “ಇವು ಬಲಿಷ್ಠವಾದ ಕೊಂಬುಗಳು (ಬಲಿಷ್ಠವಾದ ಜನಾಂಗಗಳು); ಇಸ್ರೇಲ್, ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಪರದೇಶಗಳಿಗೆ ಚದರಿಹೋಗುವಂತೆ ಮಾಡಿವೆ” ಅಂದನು.


ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ.


ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು, “ಇಲ್ಲ” ಅಂದೆನು.


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು