ಜೆಕರ್ಯ 5:3 - ಪರಿಶುದ್ದ ಬೈಬಲ್3 ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.