ಜೆಕರ್ಯ 5:8 - ಪರಿಶುದ್ದ ಬೈಬಲ್8 ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೂತ್ರಧಾರಿಯಾದ ದೂತನು: “ಇವಳೇ ಪಾಪದ ಪ್ರತೀಕ,” ಎಂದು ಹೇಳಿ, ಅವಳನ್ನು ಕೊಳಗದೊಳಗೆ ಅದುಮಿ, ಭಾರವಾದ ಆ ಸೀಸದ ಮುಚ್ಚಳವನ್ನು ತಟ್ಟನೆ ಕೊಳಗದ ಬಾಯಿಗಿಟ್ಟು ಮುಚ್ಚಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿ |