ಜೆಕರ್ಯ 6:15 - ಪರಿಶುದ್ದ ಬೈಬಲ್15 ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.” ಅಧ್ಯಾಯವನ್ನು ನೋಡಿ |