Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:3 - ಪರಿಶುದ್ದ ಬೈಬಲ್‌

3 ಬಿಳಿ ಕುದುರೆಗಳು ಮೂರನೇ ರಥವನ್ನೂ ಕೆಂಪು ಮಚ್ಚೆಗಳುಳ್ಳ ಕುದುರೆಗಳು ನಾಲ್ಕನೇ ರಥವನ್ನೂ ಎಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೂರನೆಯ ರಥಕ್ಕೆ ಬಿಳೀ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಕುದುರೆಗಳಿದ್ದವು. ಇವೆಲ್ಲವೂ ಬಲವಾದ ಕುದುರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:3
9 ತಿಳಿವುಗಳ ಹೋಲಿಕೆ  

ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು.


“ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು