Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:5 - ಪರಿಶುದ್ದ ಬೈಬಲ್‌

5 ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದೊಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ ಎಂದುತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:5
29 ತಿಳಿವುಗಳ ಹೋಲಿಕೆ  

ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಆಗ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನ್ನ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಬಂದು ಈ ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಬರುವದು.’”


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.


ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.


ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.


ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.


ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು