Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:6 - ಪರಿಶುದ್ದ ಬೈಬಲ್‌

6 ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:6
14 ತಿಳಿವುಗಳ ಹೋಲಿಕೆ  

ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.


ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಉತ್ತರದ ರಾಜನು ದಕ್ಷಿಣದ ರಾಜ್ಯದ ಮೇಲೆ ಧಾಳಿ ಮಾಡುವನು. ಆದರೆ ಅವನು ಸೋತು ತನ್ನ ದೇಶಕ್ಕೆ ಹಿಂತಿರುಗುವನು.


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು