ಜೆಕರ್ಯ 6:8 - ಪರಿಶುದ್ದ ಬೈಬಲ್8 ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು. ಅಧ್ಯಾಯವನ್ನು ನೋಡಿ |