ಜೆಕರ್ಯ 7:10 - ಪರಿಶುದ್ದ ಬೈಬಲ್10 ವಿಧವೆಯರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡುಮಾಡಬೇಡಿ. ಒಬ್ಬರಿಗೊಬ್ಬರು ಕೇಡುಮಾಡಲು ಯೋಚಿಸಲೂಬೇಡಿ!’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.