ಜೆಕರ್ಯ 7:11 - ಪರಿಶುದ್ದ ಬೈಬಲ್11 ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”