Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:12 - ಪರಿಶುದ್ದ ಬೈಬಲ್‌

12 ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:12
34 ತಿಳಿವುಗಳ ಹೋಲಿಕೆ  

ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.’


ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.


ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”


“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


“ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.


ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ


ಯೆಹೋವನು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಮೋಶೆ ಮತ್ತು ಆರೋನರ ಮಾತಿಗೆ ಕಿವಿಗೊಡಲಿಲ್ಲ.


ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.


ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.


ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು