Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:14 - ಪರಿಶುದ್ದ ಬೈಬಲ್‌

14 ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:14
35 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.


ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಆ ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ, ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು.


ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.


ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.


ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸ್ವಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೇ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.


ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.


ಸರ್ವಶಕ್ತನಾದ ಯೆಹೋವನ ಸಂದೇಶ:


ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು