Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:3 - ಪರಿಶುದ್ದ ಬೈಬಲ್‌

3 ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:3
21 ತಿಳಿವುಗಳ ಹೋಲಿಕೆ  

ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


“ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!


“ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.


ಆಗ ನನಗೆ ಸರ್ವಶಕ್ತನಾದ ಯೆಹೋವನಿಂದ ಈ ಸಂದೇಶವು ದೊರಕಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು