ಜೆಕರ್ಯ 7:6 - ಪರಿಶುದ್ದ ಬೈಬಲ್6 ನೀವು ತಿಂದು ಕುಡಿದಾಗ ಅದು ನನಗಾಗಿ ಇತ್ತೋ? ಇಲ್ಲ. ಅದು ನಿಮ್ಮ ಒಳ್ಳೆಯದಕ್ಕಾಗಿಯೇ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಭೋಜನ ಮಾಡುವಾಗಲೂ ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವಾಗಿಯೇ ಇರುವವಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ? ಅಧ್ಯಾಯವನ್ನು ನೋಡಿ |
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”