Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:7 - ಪರಿಶುದ್ದ ಬೈಬಲ್‌

7 ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:7
23 ತಿಳಿವುಗಳ ಹೋಲಿಕೆ  

ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.


ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”


“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಜೆರಿಕೊ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ನೀವು ತಿಂದು ಕುಡಿದಾಗ ಅದು ನನಗಾಗಿ ಇತ್ತೋ? ಇಲ್ಲ. ಅದು ನಿಮ್ಮ ಒಳ್ಳೆಯದಕ್ಕಾಗಿಯೇ ಇತ್ತು.


ಇದು ಜೆಕರ್ಯನಿಗೆ ಯೆಹೋವನ ಸಂದೇಶ:


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು