Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:9 - ಪರಿಶುದ್ದ ಬೈಬಲ್‌

9 “ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 :ಸತ್ಯಾನುಸಾರ ನ್ಯಾಯತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:9
30 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ.


ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


“ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


“ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ಇದು ಜೆಕರ್ಯನಿಗೆ ಯೆಹೋವನ ಸಂದೇಶ:


ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.


“ಯಾಕೋಬನು ಒಬ್ಬ ವ್ಯಾಪಾರಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು