ಜೆಕರ್ಯ 8:12 - ಪರಿಶುದ್ದ ಬೈಬಲ್12 “ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.