17 ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.
17 ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
17 ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?
ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.
ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.
ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”