Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:2 - ಪರಿಶುದ್ದ ಬೈಬಲ್‌

2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಚೀಯೋನ್ ಪರ್ವತವನ್ನು ನಾನು ಸತ್ಯವಾಗಿಯೂ ಪ್ರೀತಿಸುತ್ತೇನೆ. ನನಗೆ ನಂಬಿಗಸ್ತಳಾಗದಿದ್ದಾಗ ನಾನು ಆಕೆಯ ಮೇಲೆ ಕೋಪಗೊಳ್ಳುವಷ್ಟರವರೆಗೆ ಪ್ರೀತಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೇನೆ. ಅತಿ ಉಗ್ರದಿಂದ ಅವಳ ವಿಷಯದಲ್ಲಿ ರೋಷವುಳ್ಳವನಾಗಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:2
12 ತಿಳಿವುಗಳ ಹೋಲಿಕೆ  

ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು. ತನ್ನ ಜನರ ಬಗ್ಗೆ ದುಃಖಿಸಿದನು.


ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಸರ್ವಶಕ್ತನಾದ ಯೆಹೋವನ ಸಂದೇಶ:


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು