ಜೆಕರ್ಯ 8:20 - ಪರಿಶುದ್ದ ಬೈಬಲ್20 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆಬೇರೆ ನಗರದ ಜನರು ಜೆರುಸಲೇಮಿಗೆ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಜನಾಂಗಗಳೂ ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.