Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:21 - ಪರಿಶುದ್ದ ಬೈಬಲ್‌

21 ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, ‘ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಂದು ಊರಿನವರು ಇನ್ನೊಂದೂರಿಗೆ ಹೋಗಿ - ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:21
10 ತಿಳಿವುಗಳ ಹೋಲಿಕೆ  

ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!


ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಯೋಹಾನನ ಈ ಮಾತನ್ನು ಕೇಳಿದ ಆ ಇಬ್ಬರು ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು