ಜೆಕರ್ಯ 8:22 - ಪರಿಶುದ್ದ ಬೈಬಲ್22 ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ಬಹು ದೇಶಗಳವರೂ ಬಲವಾದ ಜನಾಂಗಗಳವರೂ ಯೆರೂಸಲೇವಿುನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.” ಅಧ್ಯಾಯವನ್ನು ನೋಡಿ |
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.