ಜೆಕರ್ಯ 8:3 - ಪರಿಶುದ್ದ ಬೈಬಲ್3 ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.” ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.