ಜೆಕರ್ಯ 8:5 - ಪರಿಶುದ್ದ ಬೈಬಲ್5 ನಗರದ ತುಂಬಾ ಬಾಲಬಾಲೆಯರು ಆಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಬಾಲಕಿಯರೂ ತುಂಬಿಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವುದು.” ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.