ಜೆಕರ್ಯ 8:7 - ಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನೂ ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು. ಅಧ್ಯಾಯವನ್ನು ನೋಡಿ |