ಜೆಕರ್ಯ 9:1 - ಪರಿಶುದ್ದ ಬೈಬಲ್1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.