Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:12 - ಪರಿಶುದ್ದ ಬೈಬಲ್‌

12 ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:12
23 ತಿಳಿವುಗಳ ಹೋಲಿಕೆ  

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ.


ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.


ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.


ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.


ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.


ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು