ಜೆಕರ್ಯ 9:13 - ಪರಿಶುದ್ದ ಬೈಬಲ್13 ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
“ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.