ಜೆಕರ್ಯ 9:14 - ಪರಿಶುದ್ದ ಬೈಬಲ್14 ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು. ಅಧ್ಯಾಯವನ್ನು ನೋಡಿ |