Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:15 - ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:15
25 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.


ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.


ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ಬಾಣಗಳೂ ಅದನ್ನು ಓಡಿಸಲಾರವು, ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು