Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:17 - ಪರಿಶುದ್ದ ಬೈಬಲ್‌

17 ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:17
37 ತಿಳಿವುಗಳ ಹೋಲಿಕೆ  

ನಿಮ್ಮ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವವು. ನೀವು ಮಹಾ ದೊಡ್ಡ ದೇಶವನ್ನು ನೋಡುವಿರಿ.


ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.


ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.


ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು