ಜೆಕರ್ಯ 9:4 - ಪರಿಶುದ್ದ ಬೈಬಲ್4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು. ಅಧ್ಯಾಯವನ್ನು ನೋಡಿ |
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.