Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:5 - ಪರಿಶುದ್ದ ಬೈಬಲ್‌

5 “ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:5
18 ತಿಳಿವುಗಳ ಹೋಲಿಕೆ  

ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.


ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು