Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:7 - ಪರಿಶುದ್ದ ಬೈಬಲ್‌

7 ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:7
21 ತಿಳಿವುಗಳ ಹೋಲಿಕೆ  

ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


“ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” ಇದು ಯೆಹೋವನ ನುಡಿ.


“ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ.


“ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.


ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.


ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,


ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು