ಜೆಕರ್ಯ 9:8 - ಪರಿಶುದ್ದ ಬೈಬಲ್8 ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: