ಜೆಕರ್ಯ 9:9 - ಪರಿಶುದ್ದ ಬೈಬಲ್9 ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.