ಜ್ಞಾನೋಕ್ತಿಗಳು 1:19 - ಪರಿಶುದ್ದ ಬೈಬಲ್19 ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು. ಅಧ್ಯಾಯವನ್ನು ನೋಡಿ |
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.