Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:2 - ಪರಿಶುದ್ದ ಬೈಬಲ್‌

2 ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವುಗಳಿಂದ ಜನರು ಜ್ಞಾನವನ್ನೂ ಶಿಕ್ಷೆಯನ್ನೂ ಪಡೆದು ಬುದ್ಧಿವಾದಗಳನ್ನು ಗ್ರಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:2
13 ತಿಳಿವುಗಳ ಹೋಲಿಕೆ  

ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು.


ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.


ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.


ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!


ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು