Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:22 - ಪರಿಶುದ್ದ ಬೈಬಲ್‌

22 “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:22
34 ತಿಳಿವುಗಳ ಹೋಲಿಕೆ  

ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ


ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ತಾನೇ ತಿಳುವಳಿಕೆಯನ್ನು ಹೊಂದವನು.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.


ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.


ಸೋಮಾರಿಯೇ, ಇನ್ನೆಷ್ಟುಕಾಲ ಮಲಗಿಕೊಂಡಿರುವೆ? ನಿನ್ನ ವಿಶ್ರಾಂತಿಯಿಂದ ಯಾವಾಗ ಎದ್ದೇಳುವೆ?


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.


ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.


“ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿದಂತೆ ದೇವರನ್ನು ದೂಷಿಸುತ್ತಾನೆ.


ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.


ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು