ಜ್ಞಾನೋಕ್ತಿಗಳು 1:24 - ಪರಿಶುದ್ದ ಬೈಬಲ್24 “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”