ಜ್ಞಾನೋಕ್ತಿಗಳು 1:32 - ಪರಿಶುದ್ದ ಬೈಬಲ್32 “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”