ಜ್ಞಾನೋಕ್ತಿಗಳು 1:7 - ಪರಿಶುದ್ದ ಬೈಬಲ್7 ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.