Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:12 - ಪರಿಶುದ್ದ ಬೈಬಲ್‌

12 ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:12
10 ತಿಳಿವುಗಳ ಹೋಲಿಕೆ  

ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.


ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು