Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:13 - ಪರಿಶುದ್ದ ಬೈಬಲ್‌

13 ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:13
18 ತಿಳಿವುಗಳ ಹೋಲಿಕೆ  

ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು.


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.


ಬಂಗಾರಕ್ಕಿಂತಲೂ ಮಾಣಿಕ್ಯದ ಸಮೃದ್ಧಿಗಿಂತಲೂ ಜ್ಞಾನದ ಮಾತುಗಳನ್ನಾಡುವ ತುಟಿಗಳು ಅಮೂಲ್ಯವಾಗಿವೆ.


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.


ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.


ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.


ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”


ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.


ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.


ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.


ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು