ಜ್ಞಾನೋಕ್ತಿಗಳು 10:24 - ಪರಿಶುದ್ದ ಬೈಬಲ್24 ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”