Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:26 - ಪರಿಶುದ್ದ ಬೈಬಲ್‌

26 ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹಲ್ಲಿಗೆ ಹುಳಿ ಹೇಗೋ, ಕಣ್ಣಿಗೆ ಹೊಗೆ ಹೇಗೋ; ಯಜಮಾನನಿಗೆ ಮೈಗಳ್ಳನು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಯಜಮಾನನಿಗೆ ಸೋಮಾರಿಯು ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:26
8 ತಿಳಿವುಗಳ ಹೋಲಿಕೆ  

ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.


ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?


ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.


ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು