Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:32 - ಪರಿಶುದ್ದ ಬೈಬಲ್‌

32 ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:32
13 ತಿಳಿವುಗಳ ಹೋಲಿಕೆ  

ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೋ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.


ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.


ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ.


ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನು ಹೇಳದಿರು.


ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು